ಚಿಟಗುಪ್ಪ: ಪಟ್ಟಣದಲ್ಲಿ ಗಮನ ಸೆಳೆದ ತಾಲೂಕು ಆಡಳಿತ ಸಂವಿಧಾನ ಅಂಗೀಕಾರ ದಿನಾಚರಣೆಯಲ್ಲಿ ಅಂಬೇಡ್ಕರ್ ಭಾವಚಿತ್ರದ ಮೆರವಣಿಗೆ
ಸಂವಿಧಾನ ಅಂಗೀಕಾರ ದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ತಾಲೂಕು ಆಡಳಿತ ವತಿಯಿಂದ ಬುಧವಾರ ಬೆಳಗ್ಗೆ 10.30 ಕ್ಕೆ ನಡೆದ ಡಾ. ಅಂಬೇಡ್ಕರ್ ಭಾವಚಿತ್ರದ ಭವ್ಯ ಮೆರವಣಿಗೆ ಸಾರ್ವಜನಿಕರ ಗಮನ ಸೆಳೆಯುವಲ್ಲಿ ಯಶಸ್ವಿಯಾಯಿತು. ತಹಶೀಲ್ದಾರ್ ಮಂಜುನಾಥ್ ಪಂಚಾಯತ್ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ಬಿರಾದರ್ ಪುರಸಭೆ ಅಧ್ಯಕ್ಷ ದಿಲೀಪ್ ಕುಮಾರ್ ಭಕ್ತಲ್ಕರ್ ಪುರಸಭೆ ಮುಖ್ಯ ಅಧಿಕಾರಿ ಹೊಸಮುದ್ದೀನ್ ಬಾಬಾ ಸೇರಿದಂತೆ ಇನ್ನೂ ವಿವಿಧ ಇಲಾಖೆ ಅಧಿಕಾರಿಗಳು ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು ಶಿಕ್ಷಕರು ಸಾರ್ವಜನಿಕರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.