ಚಿಕ್ಕಬಳ್ಳಾಪುರ: ಆರ್ಥಿಕ ಸಂಕಷ್ಟದ ಕಲಾವಿದರಿಗೆ ಸರ್ಕಾರದಿಂದ ಪ್ರತಿ ತಿಂಗಳ ಮಾಶಾಸನಕ್ಕೆ ಅರ್ಜಿ ಸಲ್ಲಿಕೆಗೆ ಅವಕಾಶ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಕಟಣೆ
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮುಖೇನ ನಾಡು -ನುಡಿಯ ಸೇವೆಗೆ ಸಂಬಂಧಿಸಿದಂತೆ ಕಲೆ, ಸಂಸ್ಕೃತಿ ಮತ್ತು ಸಾಹಿತ್ಯ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿ, ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕಲಾವಿದರಿಗೆ ಸರ್ಕಾರದಿಂದ ಪ್ರತಿ ತಿಂಗಳ ಮಾಶಾಸನಕ್ಕಾಗಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದ್ದು ಅರ್ಹ ಕಲಾವಿದರು ಅರ್ಜಿಯನ್ನು ಸಲ್ಲಿಸಿಕೊಳ್ಳಬಹುದಾಗಿದೆ ಎಂದು ಜಿಲ್ಲಾಡಳಿತ ಭವನದಲ್ಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇಂದು ಶುಕ್ರವಾರ ಮಧ್ಯಾನ 2 ಗಂಟೆಯಲ್ಲಿ ನೀಡಿದ ಪ್ರಕಟಣೆಯಲ್ಲಿ ತಿಳಿಸಿದೆ. ಪ್ರತಿ ತಿಂಗಳು ರೂ.2,000/-ಗಳ ಮಾಶಾಸನವನ್ನು ನೀಡುವ ಯೋಜನೆ ಜಾರಿಯಲ್ಲಿದ್ದು ಈ ಯೋಜನೆಗೆ ವರ್ಷಪೂರ್ತಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಿದೆ ಎಂದು ಇಲಾಖೆ ನೀಡಿರುವ ಪ್ರಕಟಣೆಯಲ್ಲಿ ತಿಳಿಸಿದೆ.