ಜಗಳೂರು: ಪಟ್ಟಣ ಪಂಚಾಯಿತಿ 2024-25ನೇ ಸಾಲಿನ ₹20.31 ಕೋಟಿ ಗಾತ್ರದ ಬಜೆಟ್ ಮಂಡನೆ
ಪಟ್ಟಣ ಪಂಚಾಯಿತಿ ಕೌನ್ಸಿಲರ್ ಸಭಾಂಗಣದಲ್ಲಿ 2024-25ನೇ ಸಾಲಿನ ₹20.31 ಕೋಟಿ ಗಾತ್ರದ ಬಜೆಟ್ ಅನ್ನು ಸೋಮವಾರ ತಹಶೀಲ್ದಾರ್ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸೋಮವಾರ ಮಂಡಿಸಿದರು. ಇದೇ ವೇಳೆ ಶಾಸಕ ಬಿ.ದೇವೇಂದ್ರಪ್ಪ ಸಭೆಯಲ್ಲಿ ಭಾಗವಹಿಸಿ ಮಾತನಾಡಿ, ಈ ಬಾರಿ ಬಜೆಟ್ ₹20 ಕೋಟಿಯಾಗಿದ್ದು ಪಟ್ಟಣದ ಸರ್ವಾಂಗೀಣ ಅಭಿವೃದ್ಧಿಗೆ ಪಕ್ಷಭೇದ ಮರೆತು 18 ವಾರ್ಡ್‌ಗಳ ಸದಸ್ಯರು ಒಟ್ಟಾಗಿ ಶ್ರಮಿಸಬೇಕು ಎಂದು ಹೇಳಿದರು.