ಚಿತ್ರದುರ್ಗ: ಸಾಮಾಜಿಕ & ಶೈಕ್ಷಣಿಕ ಸಮೀಕ್ಷೆ ವೇಳೆ ನಾಯಕ ಎಂದು ಸೇರ್ಪಡೆ ಮಾಡಿ: ಚಿತ್ರದುರ್ಗದಲ್ಲಿ ಮಾಜಿ ಶಾಸಕ ಎಸ್. ತಿಪ್ಪೇಸ್ವಾಮಿ ಕರೆ
ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಆಯೋಗ ಸೆಪ್ಟಂಬರ್ 22ರಿಂದ ನಡೆಸುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ, ಮ್ಯಾಸ ನಾಯಕ ಅಥವಾ ಮ್ಯಾಸ ಬೇಡ ಬುಡಕಟ್ಟು ಜನರು ಅನುಬಂಧ-3ಸಿ, ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿ, Code ಸಂಕೇತ ಸಂಖ್ಯೆ C-38.2 ರ 'NAYAKA' 'ನಾಯಕ' ಎಂದು ಬರೆಸುವಂತೆ ಮಾಜಿ ಶಾಸಕ ತಿಪ್ಪೇಸ್ವಾಮಿ ಮನವಿ ಮಾಡಿದರು. ನಗರದ ಪತ್ರಿಕಾ ಭವನದಲ್ಲಿ ಮ್ಯಾಸ ಬೇಡ ಬುಡಕಟ್ಟು ಸಂಸ್ಕೃತಿ ಸಂರಕ್ಷಣಾ ಸಮಿತಿ ವತಿಯಿಂದ ಸುದ್ದಿಗೋಷ್ಠಿ ನಡೆಸಿ ಅವರು, ಕರ್ನಾಟಕ, ಆಂಧ್ರ ಗಡಿ ಜಿಲ್ಲೆಗಳಾದ ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜನಾಂಗ ಹೆಚ್ಚಿದೆ ಎಂದರು