ರಾಯಚೂರು: ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ದಸರಾ ಕ್ರೀಡಾಕೂಟಕ್ಕೆ ಶಾಸಕ ಬಸನಗೌಡ ದದ್ದಲ್ ಚಾಲನೆ
ರಾಯಚೂರು ನಗರದ ಮಹಾತ್ಮ ಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಸೋಮವಾರ ಬೆಳಗ್ಗೆ ಕಲ್ಬುರ್ಗಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದೆ. ರಾಯಚೂರು ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಅವರು ಭಾಗವಹಿಸಿ ಚಾಲನೆ ನೀಡಿದರು. ಈ ವೇಳೆ ಟೇಬಲ್ ಟೆನಿಸ್ ಮತ್ತು ಶಟಲ್ ಬ್ಯಾಡ್ಮಿಂಟನ್ ಆಡುವ ಮೂಲಕ ಜಿಲ್ಲಾಧಿಕಾರಿಗಳು ಜಿಲ್ಲಾ ಪಂಚಾಯಿತಿ ಸಿಇಓ ಕೆ ಎಸ್ ಪಿ ಸೇರಿ ಹಲವು ಅಧಿಕಾರಿಗಳು ಕ್ರೀಡಾ ಸ್ಫೂರ್ತಿ ಮೆರೆಯುವ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.