ಕಿತ್ತೂರು: ಹುಣಶಿಕಟ್ಟಿಯಲ್ಲಿ ವಿಜ್ಞಾನ ಪ್ರಯೋಗಾಲಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದ ಶಾಸಕ ಬಾಬಾಸಾಹೇಬ್ ಪಾಟೀಲ
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹುಣಶಿಕಟ್ಟಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್ನಲ್ಲಿ ನೂತನ ವಿಜ್ಞಾನ ಪ್ರಯೋಗಾಲಯ ನಿರ್ಮಾಣಕ್ಕೆ ಶಾಸಕ ಬಾಬಾಸಾಹೇಬ್ ಪಾಟೀಲ ಅವರು ಭೂಮಿ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಕರು, ಗ್ರಾಮದ ಮುಖಂಡರು ಮತ್ತು ಹಿರಿಯರು ಉಪಸ್ಥಿತರಿದ್ದರು.