ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸೊರಬ ತಾಲೂಕಿನ ಆನವಟ್ಟಿ ಬಳಿ ನಡೆದಿದೆ. ಶಿಕಾರಿಪುರದ ವಿನಾಯಕನಗರದ ನಿವಾಸಿ 34 ವರ್ಷದ ಇರ್ಫಾನ್ ಆಟೋದಲ್ಲಿ ಹೋಗುತ್ತಿದ್ದ ವೇಳೆ ತತ್ತೂರು ಹಾಗೂ ಯೋಗರ್ಸಿ ಮಧ್ಯ ಕೆರೆ ಏರಿಯಾ ಮೇಲೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಆಟೋ ಪಲ್ಟಿ ಹೊಡೆದಿದ್ದು ಆಟೋ ಚಾಲಕ ಇರ್ಫಾನ್ ಗಂಭೀರವಾಗಿ ಗಾಯಗೊಂಡಿದ್ದಾರೆ ಆನವಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತಾದ ಮಾಹಿತಿ ಸೋಮವಾರ ಲಭ್ಯವಾಗಿದೆ.