ಮಂಗಳೂರು: ಕೆಂಪು ಕಲ್ಲು ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡ್ತಿದೆ: ಮಲ್ಲಿಕಟ್ಟೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪ
ಕೆಂಪು ಕಲ್ಲು ಗಣಿಗಾರಿಕೆಯ ಸಮಸ್ಯೆ ಸರಿಪಡಿಸಲು ರಾಜ್ಯ ಸರಕಾರ ಸಚಿವ ಸಂಪುಟದಲ್ಲಿ ಕ್ರಮ ಕೈಗೊಂಡ ಬಳಿಕ ಬಿಜೆಪಿಯ ಶಾಸಕರು ಸೇರಿ ಪ್ರತಿಭಟನೆ ನಡೆಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಕೆಂಪು ಕಲ್ಲು ಗಣಿಗಾರಿಕೆ ವಿಚಾರದಲ್ಲಿ ಬಿಜೆಪಿಯ ರಾಜಕೀಯ ನಟನೆ ಮಾಡುತ್ತಿದೆ. ಅವರಿಗೆ ಜನರ ಬಗ್ಗೆ ಪ್ರಾಮಾಣಿಕವಾದ ಕಾಳಜಿಯಿಲ್ಲ ಎಂದು ಕಾಂಗ್ರೆಸ್ ನ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಆರೋಪಿಸಿದ್ದಾರೆ.