ಶಿವಮೊಗ್ಗ: ನಗರದಲ್ಲಿ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಉದ್ಘಾಟನೆ ನೆರವೇರಿಸಿದ ಮಾಜಿ ಮುಖ್ಯಮಂತ್ರಿ ಬಿಎಸ್ ವೈ
ಶಿವಮೊಗ್ಗ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಶ್ರೀ ಜಗದ್ಗುರು ರಂಭಾಪುರೀಶ ನಿವಾಸದ ಕಟ್ಟಡದ ಉದ್ಘಾಟನೆಯನ್ನು ಬುಧವಾರ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾಕ್ಟರ್ ವೀರ ಸೋಮೇಶ್ವರ ಜಗದ್ಗುರುಗಳ ಸಾನಿಧ್ಯದಲ್ಲಿ ನೆರವೇರಿಸಿದರು. ನಗರದ ಹರಕೆರೆಯಲ್ಲಿ ನೂತನವಾಗಿ ಶ್ರೀ ಜಗದ್ಗುರು ರಂಭಾಪುರೀಶ ನಿವಾಸ ಕಟ್ಟಡವನ್ನು ಇಂದು ಲೋಕಾರ್ಪಣೆ ಮಾಡಲಾಯಿತು . ಈ ಸಂದರ್ಭದಲ್ಲಿ ಹಲವು ಗಣ್ಯರು ಸೇರಿದಂತೆ ಮಠಾಧೀಶರುಗಳು ಉಪಸ್ಥಿತರಿದ್ದರು.