ಗುಂಡ್ಲುಪೇಟೆ: ವನ್ಯಜೀವಿ ಸಫಾರಿ ನಿಲ್ಲಿಸುವಂತೆ ಒತ್ತಾಯಿಸಿ ಬೈಕ್ ರ್ಯಾಲಿ; ಪಟ್ಟಣದಲ್ಲಿ ರೈತ ಮುಖಂಡ ಮಹಾದೇವಪ್ಪ
ಜಿಲ್ಲೆಯಲ್ಲಿ ವನ್ಯಜೀವಿ ಸಫಾರಿಯನ್ನು ಬಂದ್ ಮಾಡಬೇಕೆಂದು ಒತ್ತಾಯಿಸಿ ಸೆ.25 ರಂದು ಗುಂಡ್ಲುಪೇಟೆ ಪಟ್ಟಣದಿಂದ ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ ತನಕ ಬೈಕ್ ರ್ಯಾಲಿ ನಡೆಸಲಾಗುವುದು ಎಂದು ರೈತ ಸಂಘದ ಜಿಲ್ಲಾಧ್ಯಕ್ಷ ಶಿವಪುರ ಮಹದೇವಪ್ಪ ಹೇಳಿದರು.ಪಟ್ಟಣದಲ್ಲಿ ರೈತ ಸಂಘದ ಸಭೆ ನಡೆಸಿ ಶನಿವಾರ ಅವರು ಮಾತನಾಡಿ, ಸಫಾರಿಯಿಂದ ವನ್ಯಜೀವಿಗಳಿಗೆ ತೊಂದರೆ ಉಂಟಾಗುತ್ತಿದ್ದು ಇದರಿಂದಲೂ ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಕಾರಣವಾಗುತ್ತಿದೆ. ಆದ್ದರಿಂದ ಕೂಡಲೇ ಸಫಾರಿಯನ್ನು ಬಂದ್ ಮಾಡಬೇಕೆಂದು ಒತ್ತಾಯಿಸಿ ಜೊತೆಗೆ ಹನೂರು ಹಾಗೂ ಗುಂಡ್ಲುಪೇಟೆ ತಾಲೂಕಿನಲ್ಲಿ ಕೆರೆ ತುಂಬಿಸುವಂತೆ ಆಗ್ರಹಿಸಿ ಬೈಕ್ ರ್ಯಾಲಿ ನಡೆಸಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕೆಂದರು.