ಸೊರಬ: ಜಾನುವಾರುಗಳಿಗೆ ಉಚಿತ ಕಾಲುಬಾಯಿ ಲಸಿಕೆ ಅಭಿಯಾನಕ್ಕೆ ಸೊರಬದಲ್ಲಿ ಸಚಿವರಿಂದ ಚಾಲನೆ
Sorab, Shimoga | Nov 3, 2025 ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಸೊರಬ ಇವರ ಸಹಯೋಗದಲ್ಲಿ ಸೋಮವಾರ ಸೊರಬ ತಾಲೂಕಿನ ಗಿಣಿವಾಲ ಗ್ರಾಮದಲ್ಲಿ ಹಮ್ಮಿಕೊಂಡಿದ್ದ "ಉಚಿತ ಕಾಲುಬಾಯಿ ರೋಗ ಲಸಿಕಾ ಅಭಿಯಾನ" ಕ್ಕೆ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಈ ವೇಳೆ ಮಾತನಾಡಿದವರು ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಯೋಜನೆಯಡಿಯಲ್ಲಿ ತಾಲೂಕಿನ ಜಾನುವಾರುಗಳಿಗೆ ಉಚಿತವಾಗಿ ಲಸಿಕೆ ನೀಡುತ್ತಿದ್ದು, ಕಾಲುಬಾಯಿ ರೋಗ ತಡೆಗಟ್ಟಲು ಎಲ್ಲಾ ರೈತ ಬಾಂದವರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಆರ್ಥಿಕ ನಷ್ಟ ತಡೆಯಿರಿ ಎಂದರು.