ಹೊಳಲ್ಕೆರೆ: ಪಟ್ಟಣದ ಪಿ ಎಂ ಶ್ರೀ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ
ಹೊಳಲ್ಕೆರೆ ಪಟ್ಟಣದ ಪಿ ಎಂ ಶ್ರೀ ಸರ್ಕಾರಿ ಬಾಲಕಿಯರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಕಾನೂನು ಅರಿವು ನೆರವು ಕಾರ್ಯಕ್ರಮ ಹಮ್ಮಿಕೊಂಡಿದ್ದು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಹೆಚ್.ಶ್ರೀನಿವಾಸ್ ಅವರು ಸಸಿಗೆ ನೀರು ಎರೆಯುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ದಾರೆ