ಶಿರಹಟ್ಟಿ: ಪೋಲಿಸ್ ಇಲಾಖೆಗಳ ನಿಯಮವನ್ನು ಪಾಲಿಸಿ ಸುರಕ್ಷಿತವಾಗಿರಿ : ಗೋನಾಳದಲ್ಲಿ ಇಲಾಖೆಯಿಂದ ಸಾರ್ವಜನಿಕರಿಗೆ ತಿಳುವಳಿಕೆ
ಪೋಲಿಸ್ ಇಲಾಖೆಗಳ ನಿಯಮವನ್ನು ಪಾಲಿಸಿ ಸುರಕ್ಷಿತವಾಗಿರಿ : ಗೋನಾಳದಲ್ಲಿ ಇಲಾಖೆಯಿಂದ ಸಾರ್ವಜನಿಕರಿಗೆ ತಿಳುವಳಿಕೆ ಪ್ರತಿಯೊಬ್ಬ ದ್ವಿಚಕ್ರ ವಾಹನ ಸವಾರರು ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನೀವು ಸುರಕ್ಷಿತವಾಗಿರಿ ನಿಮ್ಮನ್ನು ನಂಬಿಕೊಂಡು ಜೀವನ ನಡೆಸುತ್ತಿರುವ ಕುಟುಂಬವನ್ನು ಸುರಕ್ಷಿತವಾಗಿಡಿ ಎಂದು ಪೊಲೀಸ್ ಇಲಾಖೆ ವತಿಯಿಂದ ಸಾರ್ವಜನಿಕರಿಗೆ ತಿಳುವಳಿಕೆ ಕಾರ್ಯಕ್ರಮ ನಡೆಯಿತು. ಶಿರಹಟ್ಟಿ ಹಾಗೂ ಲಕ್ಷ್ಮೇಶ್ವರ ಉಭಯ ತಾಲೂಕುಗಳ ಪೊಲೀಸ್ ಇಲಾಖೆಯ ವತಿಯಿಂದ ಗೋನಾಳ ಗ್ರಾಮದಲ್ಲಿ ಗುರುವಾರ ಸಾಯಂಕಾಲ 4:30 ಗಂಟೆಗೆ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸಿದವರಿಗೆ ಹೆಲ್ಮೆಟ್ ಧರಿಸುವ ಬಗ್ಗೆ ತಿಳುವಳಿಕೆ ನೀಡಲಾಯಿತು.