ಕುಂದಗೋಳ: ಹೊಸಕಟ್ಟಿ ಗ್ರಾಮದಲ್ಲಿ ಚಹಾ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿ ಬಂಧಿಸಿದ ಕುಂದಗೋಳ ಅಬಕಾರಿ ಪೊಲೀಸರು
ಚಹಾ ಅಂಗಡಿಯಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಅಬಕಾರಿ ಪೊಲೀಸರು ಬಂಧಿಸಿದ್ದಾರೆ. ಕುಂದಗೋಳ ತಾಲೂಕಿನ ಹೊಸಕಟ್ಟಿ ಗ್ರಾಮದಲ್ಲಿ ಚಹಾದ ಅಂಗಡಿಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಶಿವಾನಂದ ವಿ ಮಲ್ಲಿಗವಾಡ ಎಂಬಾತನನ್ನು ಬಂಧಿಸಿದ್ದಾರೆ. ಕುಂದಗೋಳ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.