ಶೋರಾಪುರ: ಅರಕೇರಾ.ಕೆ ಗ್ರಾಮ ಪಂಚಾಯಿತಿಯಲ್ಲಿ ಗ್ಯಾರಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ ಅಭಿಯಾನ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾಗಿರುವ ಪಂಚ ಗ್ಯಾರಂಟಿಗಳು ಬಡವರ ಬದುಕಿಗೆ ಆಸರೆಯಾಗಿವೆ ಸಾರ್ವಜನಿಕರು ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬೀರಲಿಂಗ ಬಾದ್ಯಾಪುರ ಹೇಳಿದರು . ಗ್ಯಾರೆಂಟಿ ಯೋಜನೆಗಳ ನಡೆ ಗ್ರಾಮ ಪಂಚಾಯಿತಿಗಳ ಕಡೆ ಅಭಿಯಾನ ಜರುಗಿತು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಅರಕೇರಾ.ಕೆ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ, ದಲಿತರ ಪರವಾಗಿದ್ದು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿ