ಗಾಂಧಿ ಗ್ರಾಮ ಪುರಸ್ಕಾರಕ್ಕೆ ಟಿ.ಗೊಲ್ಲಹಳ್ಳಿ ಗ್ರಾಪಂ ಆಯ್ಕೆ ಕರ್ನಾಟಕ ರಾಜ್ಯದ ಪಂಚಾಯತ್ ರಾಜ್ ಇಲಾಖೆಯಿಂದ ಪ್ರತಿ ವರ್ಷ ನೀಡುವಂತಹ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಈ ಭಾರಿ ಕೆಜಿಎಫ್ ತಾಲ್ಲೂಕಿನ ಟಿ.ಗೊಲ್ಲಹಳ್ಳಿ ಗ್ರಾಮ ಪಂಚಾಯಿತಿಯನ್ನು ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. ಕೆಜಿಎಫ್ ತಾಲೂಕಿನ ಒಟ್ಟು 16 ಗ್ರಾಮ ಪಂಚಾಯಿತಿಗಳ ಪೈಕಿ ಟಿ. ಗೊಲ್ಲಹಳ್ಳಿ ಗ್ರಾಮ ಪಂಚಾಯತಿಯನ್ನು ೨೦೨೩-೨೪ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡುವ ಮೂಲಕ ರಾಜ್ಯದ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ. ಕೋಲಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹನ