ಮಳವಳ್ಳಿ: ಮಂಡ್ಯದಲ್ಲಿ ಜಿ ಪಂ ಸಿಇಒ ಮಾಹಿತಿ, ಜಲ ಶಕ್ತಿ ಅಭಿಯಾನದಡಿ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ಲಭಿಸಿದೆ ಎಂದು ತಿಳಿಸಿದ ನಂದಿನಿ
ಮಂಡ್ಯ : ಜಲ ಶಕ್ತಿ ಅಭಿಯಾನದ ಅಂಗವಾಗಿ ಜಲ ಸಂಚಾಯಿ ಜನ ಭಾಗಿದಾರಿ ಅಭಿಯಾನದಡಿ ಮಂಡ್ಯ ಜಿಲ್ಲೆಯು ಜಲ ಸಂರಕ್ಷಣೆ ಕಾಮಗಾರಿಗಳನ್ನು ಉತ್ತಮವಾಗಿ ಅನುಷ್ಟಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ರ್ಟೀಯ ಪ್ರಶಸ್ತಿ ದೊರೆತಿದೆ. ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ ಹಾಗೂ ಕೃಷಿ ಚಟುವಟಿಕೆಗಳಿಗೆ ಅಗತ್ಯ ಪ್ರಮಾಣದ ನೀರು ಒದಗಿಸುವ ಹಾಗೂ ನೀರಿನ ಸಮಸ್ಯೆ ನಿವಾರಿಸಲು ಕೈಗೊಂಡ ಜಲಶಕ್ತಿ ಅಭಿಯಾನದ ಚಟುವಟಿಕೆಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿದ್ದ ಕ್ಕಾಗಿ ಮಂಡ್ಯ ಜಿಲ್ಲೆಗೆ ಪ್ರಶಸ್ತಿಯ ಜೊತೆಗೆ 25 ಲಕ್ಷ ರೂ ನಗದು ಬಹುಮಾನವನ್ನು ನೀಡಲಾಗುತ್ತಿದೆ ಎಂದು ಮಂಡ್ಯದಲ್ಲಿ ಸೋಮವಾರ ಸಾಯಂಕಾಲ 6.30 ರ ಸಮಯದಲ್ಲಿ ಜಿ ಪಂ ಸಿಇಒ ನಂದಿನಿ ತಿಳಿಸಿದ್ದಾರೆ.