ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಚಿತ್ರದುರ್ಗದಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಶುಕ್ರವಾರ ಮಧ್ಯಾಹ್ನ 1.30 ಕ್ಕೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷರಾದ ಸೂರಪ್ಪ ಅವರ ನೇತೃತ್ವದಲ್ಲಿ ನಗರದ ಗಾಂಧಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಮೂಲಕ ಬಂದು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ. ಇನ್ನೂ ಚಿತ್ರದುರ್ಗ ಜಿಲ್ಲೆಯಲ್ಲಿ ಖರೀದಿ ಕೇಂದ್ರಕ್ಕೆ ಮಂಜೂರು ಮಾಡಿ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ಮತ್ತು ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರತೆ ಒದಗಿಸುವಂತೆ ಆಗ್ರಹಿಸಿದ್ದಾರೆ.