ದಾವಣಗೆರೆ: ನಗರದಲ್ಲಿ ಬಾಲಕ ಬೈಕ್ ಚಾಲನೆ; ಮಾಲೀಕರಿಗೆ 25 ಸಾವಿರ ರೂ ದಂಡ
ದಾವಣಗೆರೆ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಬಳಿ ಬಾಲಕ ವಾಹನ ಚಾಲನೆ ಮಾಡುವುದನ್ನು ತಡೆದು ನಿಲ್ಲಿಸಿ, ವಿಚಾರಣೆ ನಡೆಸಿ, ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ದಾವಣಗೆರೆ ಟ್ರಾಫಿಕ್ ಪೊಲೀಸರು, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ದಾವಣಗೆರೆ ಜಿಲ್ಲಾ ನ್ಯಾಯಾಲಯ ಬೈಕ್ ಮಾಲೀಕರಿಗೆ 25 ಸಾವಿರ ರೂ ದಂಡ ವಿಧಿಸಿದೆ ಎಂದು ಜಿಲ್ಲಾ ಪೊಲೀಸ್ ಇಲಾಖೆ ಶನಿವಾರ ರಾತ್ರಿ 10 ಗಂಟೆಗೆ ಪ್ರಕಟಣೆ ಮೂಲಕ ತಿಳಿಸಿದೆ.