ಕುಮಟಾ : ಹೊಸ ವರ್ಷಾಚರಣೆಯ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಬರುವ ನಿಟ್ಟಿನಲ್ಲಿ ತಾಲೂಕಿನ ಗೋಕರ್ಣದಲ್ಲಿರುವ ಕೂಡ್ಲೆ ಬೀಚ್ ಮತ್ತು ಓಂ ಬೀಚ್ ಪ್ರದೇಶಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಕುಮಾರ್ ಎನ್.ಎಂ ಅವರು ಬುಧವಾರ ಸಂಜೆ 4:00 ಗಂಟೆ ಸುಮಾರಿಗೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದರು. ಈ ಸಂದರ್ಭದಲ್ಲಿ ಸ್ಥಳದಲ್ಲಿದ್ದ ಗೋಕರ್ಣ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ಪ್ರವಾಸಿಗರ ಸುರಕ್ಷತೆಯ ಹಿತದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳು ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು.