ಮಾಲೂರು ತಾಲೂಕು ಆಡಳಿತದ ವತಿಯಿಂದ ಅದ್ದೂರಿ ಕನ್ನಡ ರಾಜ್ಯೋತ್ಸವ ಮಾಲೂರು ನಗರದ ತಾಲ್ಲೂಕು ಕಚೇರಿಯಲ್ಲಿ ತಾಲ್ಲೂಕು ಆಡಳಿತ ಹಾಗೂ ಕನ್ನಡ ಪರ ಸಂಘಟನೆಗಳ ಒಕ್ಕೂಟದ ವತಿಯಿಂದ ಶನಿವಾರ ಬೆಳಗ್ಗೆ 10 ಗಂಟೆಯಲ್ಲಿ ಹಮ್ಮಿಕೊಂಡಿದ್ದ ಅದ್ದೂರಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾಲೂರು ತಾಲ್ಲೂಕಿನ ಶಾಸಕರು ಹಾಗೂ ಕೋಮುಲ್ ಅಧ್ಯಕ್ಷರಾದ ಶ್ರೀ ಕೆ ವೈ ನಂಜೇಗೌಡ ರವರು ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ ಇದೇ ಸಂದರ್ಭದಲ್ಲಿ ತಾಯಿ ಶ್ರೀ ಭುವನೇಶ್ವರಿಗೆ ಆರತಿ ಬೆಳಗುವ ಮೂಲಕ ಭುವನೇಶ್ವರಿ ದೇವಿಯ ಭಾವಚಿತ್ರದೊಂದಿಗೆ ನಗರದ ಪ್ರಮುಖ ರಾಜ ಬೀದಿಗಳಲ್ಲಿ ಮೆರವಣಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.