ದಾಂಡೇಲಿ: ಬಸ್ ನಿಲ್ದಾಣದ ಹತ್ತಿರದ ಸಹೇಲಿ ವಸತಿ ಗೃಹದ ಹಿಂದುಗಡೆ ಖಾಲಿ ಜಾಗದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ, 6 ಜನರ ಮೇಲೆ ಪ್ರಕರಣ
ದಾಂಡೇಲಿ : ನಗರದ ಬಸ್ ನಿಲ್ದಾಣದ ಹತ್ತಿರದ ಸಹೇಲಿ ಲಾಡ್ಜ್ ಹಿಂದುಗಡೆ ಖಾಲಿ ಜಾಗದಲ್ಲಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ನಗರ ಠಾಣೆಯ ಪೊಲೀಸರು ದಾಳಿ ನಡೆಸಿ ಆರು ಜನರ ಮೇಲೆ ಪ್ರಕರಣ ದಾಖಲಿಸಿದ ಘಟನೆ ನಡೆದಿರುವುದರ ಬಗ್ಗೆ ದಾಂಡೇಲಿ ನಗರ ಪೊಲೀಸ್ ಠಾಣೆಯಿಂದ ಗುರುವಾರ ಸಂಜೆ 6:00 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ. ನಗರ ಠಾಣೆ ಪಿಎಸ್ಐ ಅಮೀನ್ ಅತ್ತಾರ ಅವರ ನೇತೃತ್ವದಲ್ಲಿ ದಾಳಿಯನ್ನು ನಡೆಸಲಾಗಿತ್ತು ದಾಳಿಯ ಸಂದರ್ಭದಲ್ಲಿ ರೂ.3,500/- ನಗದನ್ನು ಹಾಗೂ ಇಸ್ಪೀಟ್ ಆಟಕ್ಕೆ ಬಳಸುತ್ತಿದ್ದ ಇಸ್ಪೀಟ್ ಎಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.