ಅಜ್ಜಂಪುರ: ಬೋನಿಗೆ ಬಿದ್ರೂ ಕಮ್ಮಿಯಾಗಿಲ್ಲ ರೋಷಾವೇಷ..! ನಾರಾಯಣಪುರದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿದ್ದ ಚಿರತೆ.!
ಹಲವಾರು ದಿನಗಳಿಂದ ಎಲ್ಲಂದರಲ್ಲಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದ ಚಿರತೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ನಾರಾಯಣಪುರ, ತಡಗ, ಜಾವೂರು ಗ್ರಾಮಗಳಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಮೂರು ವರ್ಷದ ಹೆಣ್ಣು ಚಿರತೆಯನ್ನು ಹಿಡಿಯಬೇಕು ಎಂದು ಸ್ಥಳೀಯರು ಹಲವಾರು ಬಾರಿ ಮನವಿ ಮಾಡಿದ್ರು. ಸ್ಥಳೀಯರ ಮನವಿಯ ಮೇರೆಗೆ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಶನಿವಾರ ಮುಂಜಾನೆ ಮೂರು ವರ್ಷದ ಹೆಣ್ಣು ಚಿರತೆ ಬಿದ್ದಿದ್ದು ಸ್ಥಳೀಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.