ಶಿವಮೊಗ್ಗ: ನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ, ಚಾಲಕ ಪಾರು
ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದೆ. ಶಿವಮೊಗ್ಗ ನಗರದ ಅಮೀರ್ ಅಹಮದ್ ಸರ್ಕಲ್‌ನಲ್ಲಿ ಇಂದು ಬೆಳಗ್ಗೆ ಘಟನೆ ಸಂಭವಿಸಿದೆ. ಅದೃಷ್ಟವಶಾತ್ ಯಾರಿಗೂ ಹಾನಿಯಾಗಿಲ್ಲ. ಎ.ಎ. ಸರ್ಕಲ್ ಬಳಿ ಬಸ್ ಬರುವಾಗ ಆಟೋವೊಂದು ಅಡ್ಡ ಬಂದಿದೆ ಎಂದು ಆರೋಪಿಸಲಾಗಿದೆ. ಈ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್ ಪಲ್ಟಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಸ್ಸಿನಲ್ಲಿ ಪ್ರಯಾಣಿಕರಾರೂ ಇರಲಿಲ್ಲ. ಚಾಲಕ ಒಬ್ಬರೆ ಇದ್ದರು. ಪಶ್ಚಿಮ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.