ಶಿವಮೊಗ್ಗ: ಜಿಲ್ಲೆಯ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಪೊಲೀಸರಿಗೆ ಬ್ರೀಫಿಂಗ್
ಶಿವಮೊಗ್ಗ ಜಿಲ್ಲೆಯಾದ್ಯಂತ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪನಿರೀಕ್ಷಕರುಗಳು ಸೂಕ್ಷ್ಮಾಸ್ಥಳಗಳು ಪ್ರಮುಖ ರಸ್ತೆ ಹಾಗೂ ವೃತ್ತಗಳಲ್ಲಿ ಭಾನುವಾರ ಪೊಲೀಸ್ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಗಳಿಗೆ ಬ್ರಿಥಿಂಗ್ ಸಭೆ ನಡೆಸಿದ್ದಾರು. ಈ ವೇಳೆ ಠಾಣೆಯ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ನಿರ್ವಹಿಸಬೇಕಾದ ಕರ್ತವ್ಯದ ಕುರಿತು ಮೇಲಾಧಿಕಾರಿಗಳು ಸಲಹೆ ಸೂಚನೆಯನ್ನು ನೀಡಿದರು.