ಯಳಂದೂರು ತಾಲೂಕಿನಲ್ಲಿ ಮಾನವ ಮತ್ತು ಕಾಡುಪ್ರಾಣಿ ಸಂಘರ್ಷ ತೀವ್ರವಾಗಿ ಹೆಚ್ಚುತ್ತಿದ್ದು ಚಿರತೆ ದಾಳಿಗೆ 4 ಹಸುಗಳು ಬಲಿಯಾದ ಧಾರುಣ ಘಟನೆ ಗಂಗವಾಡಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಚಿರತೆ ದಾಳಿ ಹಿನ್ನಲೆ ರೈತರು ಬೆಚ್ಚಿಬಿದ್ದಿದ್ದು ಸ್ಥಳಕ್ಕೆ ಕೊಳ್ಳೇಗಾಲ ಶಾಸಕ ಎ.ಆರ್. ಕೃಷ್ಣಮೂರ್ತಿ ಭಾನುವಾರ ಭೇಟಿ ಕೊಟ್ಟು ಪರಿಶೀಲನೆ ನಡೆಸಿದರು. ಈ ವೇಳೆ ರೈತ ರಾಮಯ್ಯ ಮಾತನಾಡಿ, ತಮ್ಮ ಕುಟುಂಬ ನಿರ್ವಹಣೆಗೆ ಹೈನುಗಾರಿಕೆಯೇ ಆಧಾರವಾಗಿದ್ದು 5 ಹಸುಗಳಲ್ಲಿ ನಾಲ್ಕೂ ಹಸು ಮೃತಪಟ್ಟಿವೆ, ಕಳೆದ ಮೂರ್ನಾಲ್ಕು ತಿಂಗಳಿನಿಂದಲೂ ಚಿರತೆ ಉಪಟಳವಿದ್ದು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದ್ದರೇ ಈ ಘಟನೆ ಆಗುತ್ತಿರಲಿಲ್ಲ ಎಂದರು. ಇದಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕೂಡಲೇ ಚಿರತೆ ಸೆರೆಗೆ ಕ್ರಮ ಕೈಗೊಳ್ಳಿ ಎಂದರು.