ಬಂಗಾರಪೇಟೆ: ಸಮನ್ವಯತೆ ಕೊರತೆಯಿಂದ ಸರಳ ವಾಲ್ಮಿಕಿಜಯಂತಿ ಆಚರಣೆ:ನಗರದಲ್ಲಿ ಶಾಸಕ ಎಸ್ ಎನ್ ನಾರಾಯಣ ಸ್ವಾಮಿ
ವಾಲ್ಮೀಕಿ ಜಯಂತಿಯನ್ನು ಪ್ರತಿವರ್ಷ ವಿಜೃಂಭಣೆಯಿಂದ ಆಚರಣೆ ಮಾಡಲಾಗುತ್ತಿತ್ತು ವಿಪರ್ಯಾಸ ಈ ಬಾರಿ ಸಮುದಾಯ ಮುಖಂಡರು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನಡುವಿನ ಸಮನ್ವಯತೆ ಕೊರತೆಯಿಂದಾಗಿ ಸರಳವಾಗಿ ಆಚರಣೆಮಾಡಲಾಗುತ್ತಿದೆ ಎಂದು ಶಾಸಕ ಎಸ್ ಎನ್ ನಾರಾಯಣ ಸ್ವಾಮಿ ತಿಳಿಸಿದರು. ಭೀಮ ಸಭಾಂಗಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪ್ರತಿವರ್ಷ ಸಮುದಾಯದ ಮುಖಂಡರು ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಹಯೋಗದಲ್ಲಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲಾಗುತ್ತಿತ್ತು ಈ ಬಾರಿ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ನಡೆಯುತ್ತಿರುವ ಕಾರಣ ಸಮಯದ ಅಭಾವ ಎಂದ್ರು