ಬೆಂಗಳೂರು ಉತ್ತರ: ಚಾಮರಾಜಪೇಟೆ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗೆ ಮುಕ್ತಿ ನೀಡಿ : ನಗರದಲ್ಲಿ ರಾಜೇಂದ್ರ ಚೋಳನ್
ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಚಾಮರಾಜಪೇಟೆ ವಿಭಾಗ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗೆ ಮುಕ್ತಿ ನೀಡಲು ಆಯುಕ್ತರಾದ ರಾಜೇಂದ್ರ ಚೋಳನ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೇಂದ್ರ ನಗರ ಪಾಲಿಕೆಯ ಚಾಮರಾಜಪೇಟೆ ವ್ಯಾಪ್ತಿಯಲ್ಲಿ ಮಂಗಳವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ದ್ವಿಚಕ್ರ ವಾಹನದ ಮೂಲಕ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪರಿಶೀಲನೆಯ ವೇಳೆ ಸುಲ್ತಾನ್ ರಸ್ತೆ ಬಸ್ ತಂಗುದಾಣ ಹಾನಿಯಾಗಿದ್ದು, ಪಾದಚಾರಿ ಹಾಳಾಗಿದ್ದು, ಸಾಕಷ್ಟು ಅಶುಚಿತ್ವದಿಂದ ಕೂಡಿದೆ. ಬಸ್ ತಂಗುದಾಣ ದುರಸ್ಥಿಪಡಿಸಿ ಅದರ ಸುತ್ತಲೂ ಸ್ವಚ್ಛತಾ ಕಾರ್ಯ ನಡೆಸಲು ಸೂಚನೆ ನೀಡಿದರು.