ಬೆಂಗಳೂರಿನಲ್ಲಿ ಇ-ಕಾಮರ್ಸ್ ಡೆಲಿವರಿ ಬಾಯ್ ಗಳಿಂದ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿರುವುದರ ಹಿನ್ನೆಲೆಯಲ್ಲಿ, ಶುಕ್ರವಾರ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಈ ವೇಳೆ, ಕೆಲಸಕ್ಕೆ ಸೇರಿಸಿಕೊಳ್ಳುವಾಗ ಸರಿಯಾದ ಮಾಹಿತಿ ಸಂಗ್ರಹಿಸದಿರುವುದೇ ಇಂತಹ ಘಟನೆಗಳಿಗೆ ಕಾರಣ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಭವಿಷ್ಯದಲ್ಲಿ ಡೆಲಿವರಿ ಬಾಯ್ ಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾದರೆ, ಕಂಪನಿಗಳ ಮುಖ್ಯಸ್ಥರು ಮತ್ತು ಸಿಇಒ ಗಳನ್ನು ಪ್ರಕರಣಗಳಲ್ಲಿ ಸೇರಿಸುವುದಾಗಿ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಖಡಕ್ ಎಚ್ಚರಿಕೆ ನೀಡಿದ್ದಾರೆ.