ಕಲಾಜಾಥಾಗೆ ಜಿಲ್ಲಾಧಿಕಾರಿಗಳಿಂದ ಚಾಲನೆ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆ ಕುರಿತಂತೆ ಎಲ್.ಇ.ಡಿ ವಾಹನದ ಮೂಲಕ ಕಿರುಚಿತ್ರಗಳ ಪ್ರದರ್ಶನ ನೀಡುವ ಮೂಲಕ ಜನಸಾಮಾನ್ಯರಿಗೆ ಮಾಹಿತಿ ಹಾಗೂ ಪ್ರಚಾರ ನೀಡಲು ಹಮ್ಮಿಕೊಂಡಿರುವ “ಕಲಾಜಾಥಾ” ಗೆ ಕೋಲಾರ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಚಾಲನೆ ನೀಡಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಕೆ.ಎನ್.ಕವನ ಮಾತನಾಡಿ, ಈ ಕಲಾಜಾಥಾ ಜಿಲ್ಲೆಯಲ್ಲಿ ನವೆಂಬರ್ ೩ರಿಂದ ನವೆಂಬರ್ ೭ ರವರೆಗೆ ಒಟ್ಟು ೫ ದಿನಗಳು ನಡೆಯಲಿದೆ. ಕೋಲಾರ ತಾಲ್ಲೂಕಿನಲ್ಲಿ ಕಲಾಜಾಥಾದಲ್ಲಿ ಬೀದಿನಾಟಕ, ಸಂಗೀತ ಕಾ