ಅನಧಿಕೃತ/ ಪರವಾನಿಗೆ ಪಡೆಯದೆ ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ ಗಳ ವಿರುದ್ಧ ಸದಾ ಸಮರೋಪಾದಿಯಲ್ಲಿ ಬೆಂಗಳೂರು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಮತ್ತು ನೌಕರರು ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೂ ಕೊಡಿಗೆ ಹಳ್ಳಿ ಸೇರಿದಂತೆ ಹಲವು ಕಡೆ ಕಾರ್ಯನಿರ್ವಹಿಸುತ್ತಿದ್ದು ಇದರ ಭಾಗವಾಗಿ ಒಂದೇ ದಿನ ದಾಖಲೆಯ 473 ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ ಗಳನ್ನು ತೆರವುಗೊಳಿಸಿದ್ದಾರೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಸೂಚನೆಯಂತೆ ಸ್ವಚ್ಛ ಮತ್ತು ಸುಂದರವಾಗಿ ಕಾಪಾಡಲು ಒಂದೇ ದಿನ ಅವಿರತವಾಗಿ ಶ್ರಮಿಸಿ ದಾಖಲೆಯ 473 ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್ ಗಳನ್ನು ಪಾಲಿಕೆಯ ಅಧಿಕಾರಿಗಳ ಮತ್ತು ನೌಕರರ ತಂಡ ತೆರವು ಕಾರ್ಯಾಚರಣೆಯನ್ನು ನಡೆಸಿದೆ.