ದಾಂಡೇಲಿ : ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಹಾಗೂ ಮಾರಾಟ ಮಾಡುತಿದ್ದ ವಿವಿಧ ಅಂಗಡಿಗಳ ಮೇಲೆ ನಗರಸಭೆಯ ಪೌರಾಯುಕ್ತ ವಿವೇಕ ಬನ್ನೆ ಮಾರ್ಗದರ್ಶನದಲ್ಲಿ ನಗರ ಸಭೆಯ ಅಧಿಕಾರಿಗಳ ಮತ್ತು ಸಿಬ್ಬಂದಿಗಳ ತಂಡ ಬುಧವಾರ ದಾಳಿ ನಡೆಸಿದ್ದಾರೆ. ನಗರದಲ್ಲಿ ವಿವಿಧ ಅಂಗಡಿಗಳು ಹಾಗೂ ಬೀದಿಬದಿ ಅಂಗಡಿಗಳ ಮೇಲೆ ದಾಳಿ ನಡೆಸಿದ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಏಕ ಬಳಕೆ ಪ್ಲಾಸ್ಟಿಕ್ ಹಾಗೂ ಮಾರಾಟಕ್ಕೆ ಇಟ್ಟಿದ್ದ ನಿಷೇಧಿದ್ದ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡಿದ್ದಾರೆ. ನಗರದ ಸುಮಾರು 25ಕ್ಕೂ ಅಧಿಕ ಅಂಗಡಿಗಳ ಮೇಲೆ ದಾಳಿ ನಡೆಸಿ 30 ಕೆಜಿ ನಿಷೇಧಿತ ಏಕ ಪ್ಲಾಸ್ಟಿಕ್ ಚೀಲಗಳನ್ನು ವಶಪಡಿಸಿಕೊಂಡು ದಂಡ ಆಕರಣೆ ಮಾಡಲಾಗಿದೆ. ಈ ಬಗ್ಗೆ ಬುಧವಾರ ಸಂಜೆ 5.30 ಗಂಟೆ ಸುಮಾರಿಗೆ ಮಾಧ್ಯಮಕ್ಕೆ ಮಾಹಿತಿ ಲಭ್ಯವಾಗಿದೆ.