ಬೆಂಗಳೂರಿನ ವಿವೇಕ ನಗರ ಮುಖ್ಯ ರಸ್ತೆಯಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾಲೇಜು ಬಸ್ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ತಾಯಿ ಸಂಗೀತಾ ಮತ್ತು 8 ವರ್ಷದ ಮಗ ಪಾರ್ಥ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಗನನ್ನು ಶಾಲೆಗೆ ಬಿಡಲು ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದ ನಂತರ ಬಸ್ ಚಾಲಕ ಪರಾರಿಯಾಗಿದ್ದಾನೆ. ವಿವೇಕ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ.