ಬೆಂಗಳೂರು ಉತ್ತರ: ಫ್ರೀಡಂ ಪಾರ್ಕ್ ತಾತ್ಕಾಲಿಕವಾಗಿ ಬಂದ್, ಯಾಕೆ ಗೊತ್ತಾ?
ಜಿಬಿಎಯಿಂದ ಫ್ರೀಡಂ ಪಾರ್ಕ್ನಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ, ಶನಿವಾರದಿಂದ ಪಾರ್ಕ್ ಅನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಐದು ಕೋಟಿ ರೂ ವೆಚ್ಚದಲ್ಲಿ ಶೌಚಾಲಯ, ಹೋರಾಟಗಾರರಿಗೆ ಮೂಲ ಸೌಕರ್ಯ ಕಲ್ಪಿಸುವ ಕಾಮಗಾರಿ ನಡೆಯುತ್ತಿದ್ದು, ಇದು ಪೂರ್ಣಗೊಂಡ ನಂತರ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗುವುದು. ಪ್ರಸ್ತುತ ವಿದ್ಯುತ್ ಸಂಪರ್ಕ ಮತ್ತು ನೀರಿನ ಸೌಲಭ್ಯ ಸ್ಥಗಿತಗೊಂಡಿದೆ. ಶಾಶ್ವತ ಕಾಮಗಾರಿ ಪೂರ್ಣಗೊಳ್ಳುವವರೆಗೆ ಇಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡುವುದಿಲ್ಲ.