ಚಿಕ್ಕಬಳ್ಳಾಪುರ: ನಗರದಲ್ಲಿ ಹಾಲು ಉತ್ಪಾದಕರ ಹಾಗೂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ
ಹಾಲು ಉತ್ಪಾದಕರ ಹಾಗೂ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಚಿಕ್ಕಬಳ್ಳಾಪುರ ನಗರದಲ್ಲಿ ಇಂದು ಸೋಮವಾರ ಮದ್ಯಾನ 12-30 ಗಂಟೆಯಲ್ಲಿ ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಹಾಲು ಉತ್ಪಾದಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿಎನ್ ಕೃಷ್ಣಪ್ಪ ನಗರದ ಶಿಡ್ಲಘಟ್ಟ ಸರ್ಕಲ್ ನಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಹಾಲು ಉತ್ಪಾದಕರಿಗೆ ಬಾಕಿ ಇರುವ ಪ್ರೋತ್ಸಾಹ ಧನವನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡಬೇಕು ಪ್ರೋತ್ಸಾಹದನ 5 ರೂ ಗಳ ಬದಲಿಗೆ 10 ರೂ ಗಳಿಗೆ ಏರಿಕೆ ಮಾಡಬೇಕು ಎಂದು ಅಗ್ರಹಿಸಿದರು.