ಗದಗ: ಭ್ರಷ್ಟ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದೇವೆ: ನಗರದಲ್ಲಿ ಸಚಿವ ಎಚ್ ಕೆ ಪಾಟೀಲ
Gadag, Gadag | Sep 29, 2025 ಗದಗ ತಹಶೀಲ್ದಾರ್ ಕಚೇರಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿದ್ದೆ. ಅಲ್ಲಿನ ಭ್ರಷ್ಟಾಚಾರದ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಪರಿಶೀಲಿಸಿದ್ದೇನೆ. ಕೆಲ ಅಧಿಕಾರಿಗಳು ಹಣ ಪಡೆದು ವೃದ್ಧಾಪ್ಯ ವೇತನ, ಸಂಧ್ಯಾ ಸುರಕ್ಷಾ ವೇತನ ಮಾಡಿಸಿಕೊಟ್ಟಿದ್ದರು ಅಂತ ಮಾಹಿತಿ ತಿಳಿದು ಬಂದಿತ್ತು. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಯನ್ನು ಅಮಾನತ್ತು ಮಾಡಿದ್ದೇವೆ. ಭ್ರಷ್ಟಾಚಾರ ಮಾಡಿ ಅಧಿಕಾರ ನಡೆಸುವ ಯಾವುದೇ ಅಧಿಕಾರಿ ಇದ್ದರೂ ಅಂತವರನ್ನು ಅಧಿಕಾರದಲ್ಲಿ ಮುಂದುವರೆಯಲು ಬಿಡುವುದಿಲ್ಲ ಅಂತ ಖಡಕ್ ಆಗಿ ಸಚಿವ ಎಚ್ ಕೆ ಪಾಟೀಲ್ ಹೇಳಿದ್ದಾರೆ.