ಶಿವಮೊಗ್ಗ: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆ ಆರೋಗ್ಯ ವಿಚಾರಿಸಿದ ಸಂಸದ ಬಿ.ವೈ.ರಾಘವೇಂದ್ರ
ಕರ್ತವ್ಯದ ನಿರತರಾಗಿದ್ದ ಸಂದರ್ಭದಲ್ಲಿ ಅಪಘಾತಕ್ಕೆ ಒಳಗಾಗಿ ಶಿವಮೊಗ್ಗ ನಗರದ ನಾರಾಯಣ ಹೃದಯಾಲದಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆ ಶ್ರೀಮತಿ ರೇಖಾ ಅವರನ್ನು ಶುಕ್ರವಾರ ಸಂಜೆ 6 ಗಂಟೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ ಆರೋಗ್ಯ ವಿಚಾರಿಸಿದ್ರು. ಆಸ್ಪತ್ರೆಯಲ್ಲಿ ಭೇಟಿ ಮಾಡಿ ಯಾವುದೇ ಕಾರಣಕ್ಕೂ ಕುಟುಂಬಸ್ಥರು ಧೃತಿಗೆಡಬಾರದು ಎಂದು ಧೈರ್ಯ ತುಂಬಿ ನಿಮ್ಮೊಂದಿಗೆ ನಾನಿದ್ದೇನೆ ಎಂದು ಧೈರ್ಯ ತುಂಬಿದ್ದಾರೆ. ಈ ವೇಳೆ ಎಂಎಲ್ ಸಿ ಧನಂಜಯ ಸರ್ಜಿ ಉಪಸ್ಥಿತರಿದ್ದರು.