ಬಳ್ಳಾರಿ: ತುಂಗಭದ್ರಾ ಜಲಾಶಯದಿಂದ 2ನೇ ಬೆಳೆಗೆ ನೀರು ಒದಗಿಸಲು ಸಾಧ್ಯವಿಲ್ಲ; ಸಚಿವ ತಂಗಡಗಿ ಹೇಳಿಕೆಗೆ ನಗರದಲ್ಲಿ ರೈತ ಸಂಘಟನೆಗಳು ಆಕ್ರೋಶ
ತುಂಗಭದ್ರಾ ಜಲಾಶಯದಿಂದ 2ನೇ ಬೆಳೆಗೆ ನೀರು ಒದಗಿಸಲು ಸಾಧ್ಯವಿಲ್ಲ ಸಚಿವ ತಂಗಡಗಿ ಹೇಳಿಕೆಗೆ ರೈತ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಜ್ಯ ಸರ್ಕಾರ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ನಡೆಸಿ ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಎರಡನೆಯ ಬೆಳೆಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಬೇಕು ತುಂಗಭದ್ರಾ ರೈತ ಸಂಘ ಒತ್ತಾಯಿಸಿದೆ. ಬಳ್ಳಾರಿ ನಗರದಲ್ಲಿ ಬುಧವಾರ ಸಂಜೆ 5ಗಂಟೆಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡರು ತುಂಗಭದ್ರಾ ಗೇಟ್ ಅಳವಡಿಸುವ ವಿಚಾರದಲ್ಲಿ ರಾಜ್ಯ ಸರ್ಕಾರ, ಜಿಲ್ಲಾ ಉಸ್ತುವಾರಿ ಸಚಿವರು ಕಾಲಹರಣ ಮಾಡಿದ್ದಾರೆ. ರೈತರಿಗೆ ಮೊದಲ ಬೆಳೆ ಬರುವುದೇ ಅನಿಶ್ಚಿತವಾಗಿದೆ. ಮತ್ತಷ್ಟು ಸಂಕಷ್ಟಕ್ಕೀಡು ಮಾಡಲೆಂದೇ ಗೇಟ್ ಅಳವಡಿಸಲು ಸರ್ಕಾರ ಮುಂದಾಗಿದೆ. ಇದು ರೈತ ವಿರೋಧಿ ಧೋ