ಕೋಲಾರ: ಸ್ವಾತಂತ್ರ‍್ಯ ದಿನಾಚರಣೆಯ ಅಂತಿಮ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆ; ಅಧಿಕಾರಿಗಳಿಗೆ ಡಿಸಿ ಕೊಟ್ರು ಇಂಪಾರ್ಟೆಂಟ್ ಕೆಲಸ..
Kolar, Kolar | Aug 11, 2025 ಆಗಸ್ಟ 15 ರಂದು ಜರುಗುವ ಸ್ವಾತಂತ್ರ‍್ಯೋತ್ಸವ ದಿನಾಚರಣೆ ಅಚ್ಚುಕಟ್ಟಾಗಿ ಶಿಸ್ತಿನಿಂದ ಜರುಗಲು ಸಂಬAಧಿತ ಇಲಾಖಾಧಿಕಾರಿಗಳು ಪೂರ್ವತಯಾರಿ ಮಾಡಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಎಂ. ಆರ್. ರವಿ ತಿಳಿಸಿದರು. ಸೋಮವಾರ ಸಂಜೆ 5: 30ರ ಸಮಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಸ್ವಾತಂತ್ರ‍್ಯ ದಿನಾಚರಣೆ ಕುರಿತು ಜರುಗಿದ ಅಂತಿಮ ಸಿದ್ಧತೆಗಳ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಸಂಬAಧಿತ ಅಧಿಕಾರಿಗಳಿಗೆ ಕಾರ್ಯಕ್ರಮದ ಯಶಸ್ವಿನ ಕುರಿತಂತೆ ಸೂಕ್ತ ನಿರ್ದೇಶನಗಳನ್ನು ನೀಡಿ ಮಾತನಾಡಿದರು.