ಕಾಳಗಿ ರೈತ ಸಂಪರ್ಕ ಕೇಂದ್ರದ ವತಿಯಿಂದ ಕಾಳಗಿಯಲ್ಲಿ ಹಾಗೂ ಕೊಡ್ಲಿ ರೈತ ಸಂಪರ್ಕ ಕೇಂದ್ರದ ವತಿಯಿಂದ ರಟಕಲ್ ವೀರಕ್ತ ಮಠದಲ್ಲಿ ರೈತರಿಗೆ ಹಿಂಗಾರು ಬಿತ್ತನೆಯ ಬೀಜ ವಿತರಣೆ ಕಾರ್ಯಕ್ರಮಗಳು ನೆರವೇರಿದವು. ಈ ಸಂದರ್ಭದಲ್ಲಿ ಶಾಸಕ ಡಾ. ಅವಿನಾಶ್ ಜಾಧವ ಅವರು ಭಾಗವಹಿಸಿ ಮಾತನಾಡಿದರು. ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳೊಂದಿಗೆ ಸಂಪರ್ಕಿಸಿ ಅವರ ಮಾರ್ಗದರ್ಶನ ಪಡೆದು ಸುಧಾರಿತ ಕೃಷಿ ಪದ್ಧತಿಗಳನ್ನು ಅಳವಡಿಸಿಕೊಳ್ಳುವಂತೆ ರೈತರಿಗೆ ಮನವಿ ಮಾಡಿ ಬಿಜ ವಿತರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ರಟಕಲನ ಪೂಜ್ಯರು, ಸ್ಥಳೀಯ ಮುಖಂಡರು, ರೈತರು ಹಾಗೂ ಕೃಷಿ ಅಧಿಕಾರಿಗಳು ಉಪಸ್ಥಿತರಿದ್ದರು ಎಂದು ಸೋಮವಾರ 8 ಗಂಟೆಗೆ ಮಾಹಿತಿ ಲಭ್ಯವಾಗಿದೆ.