ಹಾವೇರಿ: ನಾಗಪುರ ದೀಕ್ಷಾ ಭೂಮಿ ಸಂದರ್ಶನಕ್ಕೆ ತೆರಳುತ್ತಿರುವ ಬಸ್ಸುಗಳಿಗೆ ನಗರದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ್ ಅವರಿಂದ ಹಸಿರು ನಿಶಾನೆ
Haveri, Haveri | Sep 30, 2025 ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳಿಗೆ ಮಹಾರಾಷ್ಟ್ರದ ನಾಗಪುರದಲ್ಲಿನ ದೀಕ್ಷಾ ಭೂಮಿ ಸಂದರ್ಶನಕ್ಕೆ ಉಚಿತ ಪ್ರಯಾಣಕ್ಕಾಗಿ ತೆರಳುವ ನಾಲ್ಕು ಬಸ್ಸುಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ್ ದಾನಮ್ಮನವರ ಮಂಗಳವಾರ ಮಧ್ಯಾಹ್ನ ನಗರದ ಡಿ.ದೇವರಾಜ್ ಅರಸು ಭವನ ಹತ್ತಿರ ಹಸಿರು ನಿಶಾನೆ ತೋರುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್ಎಫ್ ಎನ್ ಗಾಜಿಗೌಡ್ರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧ ವಂಟಗೋಡಿ, ನಗರಸಭೆ ಸದಸ್ಯ ಸಂಜೀವಕುಮಾರ ನೀರಲಗಿ, ಕೆ.ಸಿ.ಸಿ. ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ ಸೇರಿದಂತೆ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.