ಬೆಂಗಳೂರು ಉತ್ತರ: ರಾಜ್ಯಕ್ಕೆ ದೀಪಾವಳಿ ಗಿಫ್ಟ್: 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳ: ನಗರದಲ್ಲಿ ಡಾ. ಶರಣ್ ಪ್ರಕಾಶ್ ಪಾಟೀಲ್
ರಾಜ್ಯದಲ್ಲಿ ಹಬ್ಬಕ್ಕೆ ಮುನ್ನವೇ ದೀಪಾವಳಿ ಸಡಗರ ಬಂದಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಅನ್ವಯವಾಗುವಂತೆ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ 422 ಪಿಜಿ ಸೀಟುಗಳ ಸಂಖ್ಯೆ ಹೆಚ್ಚಳವಾಗಿದೆ. ಹಲವಾರು ವರ್ಷಗಳ ಬೇಡಿಕೆ ಈಗ ಈಡೇರಿದಂತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ತಿಳಿಸಿದ್ದಾರೆ. ವಿಕಾಸಸೌಧದಲ್ಲಿ ಶನಿವಾರ ಮದ್ತಾಹ್ನ 2 ಗಂಟೆ ಸುಮಾರಿಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಉತ್ತಮ ಗುಣಮಟ್ಟದ ಉನ್ನತ ಶಿಕ್ಷಣ ನೀಡುವುದೇ ನಮ್ಮ ಸರ್ಕಾರದ ಗುರಿ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.