ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಮಸ್ಕಿ ತಾಲೂಕು ಘಟಕಕ್ಕೆ ಮತ್ತೊಮ್ಮೆ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಅಬ್ದುಲ್ ಅಜೀಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ್ ಕೆಳೂತ್ ಅವಿರೋಧ ಆಯ್ಕೆಯಾದರು. ಮಸ್ಕಿಯ ಪತ್ರಿಕಾ ಭವನದಲ್ಲಿ ಸೋಮವಾರ 1 ಗಂಟೆಗೆ ತಾಲೂಕು ಘಟಕಕ್ಕೆ ಚುನಾವಣೆ ಪ್ರಕ್ರಿಯೆ ನಡೆಸಲಾಯಿತು. ಉಪಾಧ್ಯಕ್ಷರಾಗಿ ಬದರಿನಾಥ, ಖಜಾಂಚಿಯಾಗಿ ಅಮರೇಶ ಸಾಲಿಮಠ ಆಯ್ಕೆಯಾದರು. ಅವಿರೋಧ ಆಯ್ಕೆ ನಡೆದ ಬಳಿಕ ಜಿಲ್ಲಾಧ್ಯಕ್ಷರಾದ ಆರ್.ಗುರುನಾಥ ಫಲಿತಾಂಶ ಪ್ರಕಟಿಸಿ ವಿಜೇತರಿಗೆ ಪ್ರಮಾಣಪತ್ರ ವಿತರಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ಧಯ್ಯ ಸ್ವಾಮಿ ಕುಕನೂರು, ರಾಜ್ಯ ಸಮಿತಿ ಸದಸ್ಯ ಬಸವರಾಜ ನಾಗಡದಿನ್ನಿ ಇದ್ದರು