ಕಾಳಗಿ ತಾಲೂಕಿನ ಸುಗೂರು ವೆಂಕಟೇಶ್ವರ ದೇವಸ್ಥಾನಕ್ಕೆ ವೈಕುಂಠ ಏಕಾದಶಿ ಪ್ರಯುಕ್ತ ಸಮರೋಪಾದಿಯಲ್ಲಿ ಭಕ್ತರು ಹರಿದು ಬಂದಿದ್ದರು. ವೈಕುಂಠ ಏಕಾದಶಿ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ ಅಲಂಕಾರ ಕೈಂಕಾರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಸಕ ಬಸವರಾಜ್ ಮತ್ತಿಮಡು ದಂಪತಿ ಕುಟುಂಬ ಸಮೇತ ದೇವಸ್ಥಾನಕ್ಕೆ ಭೇಟಿ ನೀಡಿ, ಉತ್ತರ ದ್ವಾರ ಹಾಗೂ ದೇವರ ದರ್ಶನಾಶೀರ್ವಾದ ಪಡೆದರು.