ಹೊಸಕೋಟೆ: ನಂದಗುಡಿಯಲ್ಲಿ ಬಿಡಿಸಿಸಿ ಬ್ಯಾಂಕ್ ನ ನೂತನ ಶಾಖೆಯನ್ನು ಉದ್ಘಾಟಿಸಿದ ಶಾಸಕ ಶರತ್ ಬಚ್ಚೇಗೌಡ
ಹೊಸಕೋಟೆ: ನಂದಗುಡಿಯಲ್ಲಿ ಬಿಡಿಸಿಸಿ ಬ್ಯಾಂಕ್ ಶಾಖೆಯ ಉದ್ಘಾಟನೆ.ಹೊಸಕೋಟೆ ವಿಧಾನಸಭಾ ಕ್ಷೇತ್ರದ ನಂದಗುಡಿ ಗ್ರಾಮದಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನ ನಂದಗುಡಿ ಶಾಖೆಯನ್ನು ವಿಧಾನ ಪರಿಷತ್ ಸದಸ್ಯರಾದ ಶ್ರೀ ರವಿ, ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಶ್ರೀ ವಿಜಯ್ ದೇವ್, ಉಪಾಧ್ಯಕ್ಷರಾದ ಶ್ರೀ ಕೆ.ಕೃಷ್ಣಮೂರ್ತಿ ಹಾಗೂ ನಿರ್ದೇಶಕರುಗಳು, ಗಣ್ಯರೊಂದಿಗೆ ಉದ್ಘಾಟಿಸಲಾಯಿತು. ಇದೇ ಸಂದರ್ಭದಲ್ಲಿ, ನೆಲವಾಗಿಲು ವಿಎಸ್‌ಎಸ್‌ಎನ್ ಸೊಸೈಟಿಯಲ್ಲಿ ನಿಯಂತ್ರಿತ ಆಹಾರ ಧಾನ್ಯ ವಿತರಣಾ ಗೋದಾಮು ಕಟ್ಟಡ ನಿರ್ಮಿಸುವಂತೆ ವಿಎಸ್‌ಎಸ್‌ಎನ್ ಬ್ಯಾಂಕಿನ ಅಧ್ಯಕ್ಷರು ಹಾಗೂ ನಿರ್ದೇಶಕರುಗಳು ನೀಡಿದ ಮನವಿ ಪತ್ರವನ್ನು ಸ್ವೀಕರಿಸಲಾಯಿತು.