ಬೆಂಗಳೂರು ಉತ್ತರ: ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಗೃಹ ಸಚಿವ ಪರಮೇಶ್ವರ್ ತರಾಟೆ
ಜೈಲಿನಲ್ಲಿರುವ ಕೈದಿಗಳಿಗೆ ವಿಶೇಷ ಆತಿಥ್ಯ ದೊರೆಯುತ್ತಿರುವ ದೃಶ್ಯಗಳು ವೈರಲ್ ಆದ ಬೆನ್ನಲ್ಲೇ ನಗರದ ಫ್ರೀಡಂ ಪಾರ್ಕ್ ಬಳಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಗೃಹ ಸಚಿವ ಡಾ ಜಿ.ಪರಮೇಶ್ವರ್ ಅವರು ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಭೆ ನಡೆಸಿದ್ದು, ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಕಚೇರಿಯಲ್ಲಿ ನಡೆಯುತ್ತಿರುವ ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಡಾ.ಎಂ.ಎ.ಸಲೀಂ, ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೇರಿದಂತೆ ಹಲವು ಹಿರಿಯ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು. ಇನ್ನು ಸಭೆಯಲ್ಲಿ ಕೈದಿಗಳ ಮೋಜು, ಮಸ್ತಿಯ ಕುರಿತು ಗರಂ ಆಗಿರುವ ಗೃಹ ಸಚಿವರು, ಕಾರಾಗೃಹದೊಳಗಿರುವ ಕೈದಿಗಳಿಗೆ ಮೊಬೈಲ್ ಫೋನ್ಗಳು ಸಿಕ್ಕಿದ್ದು ಹೇಗೆ?