ರೋಣ: ರೋಣ ಪೊಲೀಸ್ ಹಾಗೂ ಆಹಾರ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆ, ಹುನಗುಂಡಿ ಬಳಿ ಅಕ್ರಮ ಅನ್ನಭಾಗ್ಯ ಅಕ್ಕಿ ವಶಕ್ಕೆ
Ron, Gadag | Sep 28, 2025 ಹಸಿವು ಮುಕ್ತ ರಾಜ್ಯ ಆಗಲಿ ಅಂತ ಸರ್ಕಾರದಿಂದ ಉಚಿತ ಅಕ್ಕಿಯನ್ನು ಬಡವರಿಗೆ ವಿತರಿಸಲಾಗುತ್ತಿದೆ. ಇದನ್ನೇ ಬಂಡವಾಳವನ್ನಾಗಿ ಮಾಡಿಕೊಂಡ ಕೆಲವರು ಕಾಳ ಸಂತೆಯಲ್ಲಿ ಮಾರಾಟ ಮಾಡಲು ಅಕ್ರಮವಾಗಿ ಅಕ್ಕಿಯನ್ನು ಸಾಗಾಟ ಮಾಡುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ರೋಣ ಪೊಲೀಸರು ಹಾಗೂ ಆಹಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಚರಣೆ ನಡೆಸಿ ವಾಹನ ಸಮೇತ ಆರೋಪಿಯನ್ನು ಬಂಧಿಸಿದ್ದಾರೆ.