ಸರ್ಕಾರಿ ಶಾಲೆಗಳನ್ನು ಮುಚ್ಚುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಕಲಘಟಗಿ ತಾಲೂಕಿನ ಲಿಂಗನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರು ಎ.ಐ.ಡಿ.ಎಸ್.ಓ ಸಂಘಟನೆ ನೇತೃತ್ವದಲ್ಲಿ ಲಿಂಗನಕೊಪ್ಪ ಗ್ರಾಮದ ವಿದ್ಯಾರ್ಥಿಗಳು ಹಾಗೂ ಗ್ರಾಮಸ್ಥರು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಪ್ರತಿಭಟನೆ ನಡೆಸಿದರು. ಕರ್ನಾಟಕ ಪಬ್ಲಿಕ್ ಸ್ಕೂಲ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ನಮ್ಮ ಊರಿನ ಶಾಲೆಯನ್ನು ಮುಚ್ಚಲು ಮುಂದಾಗಿರುವ ಕ್ರಮ ಖಂಡನೀಯ ಎಂದು ಪ್ರತಿ