Install App
Login
HOME
Delhi
Haryana
Uttar Pradesh
Bihar
Chhattisgarh
Madhya Pradesh
Rajasthan
Jharkhand
Himachal Pradesh
Uttarakhand
Punjab
Andhra Pradesh
Telangana
Tamil Nadu
Karnataka
Maharashtra
Assam
West Bengal
Tripura
Gujarat
Odisha
Kerala
Jansamasya
News
पुलिस
Bjp
National
Police
Bihar
India
कांग्रेस
बीजेपी
Gujarat
मुख्यमंत्री
Congress
Modi
Delhi
Viral
मारपीट
Crime
Dm
Up
अमित_शाह
Bollywood
Breakingnews
Narendramodi
Madhya_pradesh
उत्तरप्रदेश
Pmmodi
Rahulgandhi
यूपी
कानपुर
mdrafiq790
Previous slide
Next slide
ವಿಶ್ವವಿದ್ಯಾಲಯಗಳು ಗೌರವ ಡಾಕ್ಟರೇಟ್ ನೀಡಲು ಅರ್ಹತಾ ಮಾನದಂಡ, ಪಾರದರ್ಶಕ ಆಯ್ಕೆ ಪ್ರಕ್ರಿಯೆ ಹಾಗೂ ತಜ್ಞ ಸಮಿತಿಯ ಶಿಫಾರಸ್ಸು ಕಡ್ಡಾಯ ಮಾಡುವುದರ ಜೊತೆಗೆ ಯಾವುದೇ ಪ್ರಭಾವಕ್ಕೆ ಒಳಗಾಗಿ ಪದವಿ ನೀಡಿದರೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಕಾಯಿದೆಯನ್ನು ರೂಪಿಸುವ ಕುರಿತು.
Yadgir, Yadgir
| Aug 16, 2026
MORE NEWS
ಕುವೆಂಪು ವಿಶ್ವಮಾನವ ತತ್ವ ಸಮಾಜಕ್ಕೆ ದಾರಿದೀಪ: ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮೈಸೂರು: ರಾಷ್ಟ್ರಕವಿ ಕುವೆಂಪು ಅವರ ವಿಶ್ವಮಾನವ ಸಂದೇಶವು ಕೇವಲ ಸಾಹಿತ್ಯಿಕ ವಿಚಾರವಾಗಿ ಉಳಿಯದೆ, ಪ್ರತಿಯೊಬ್ಬರ ಬದುಕಿನ ನಿತ್ಯ ಮೌಲ್ಯವಾಗಬೇಕು. ಸಮಾಜದಲ್ಲಿ ಸಮಾನತೆ, ಸಹಬಾಳ್ವೆ ಮತ್ತು ಮಾನವೀಯತೆಯ ಬೆಳಕು ಸದಾ ಬೆಳಗಿದಾಗ ಮಾತ್ರ ನೈಜ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ನ್ಯಾಯ ಸಾಕಾರಗೊಳ್ಳಲು ಸಾಧ್ಯ ಎಂದು ನಗರಾಭಿವೃದ್ಧಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು. ಮೈಸೂರಿನ ಕುವೆಂಪು ನಗರದ ಸೌಗಂಧಿಕ ಉದ್ಯಾನವನದಲ್ಲಿ ಆಯೋಜಿಸಲಾಗಿದ್ದ ಕುವೆಂಪು ವಿಶ್ವಮಾನವ ಕ್ಷೇಮಾಭಿವೃದ್ಧಿ ಟ್ರಸ್ಟ್‌ನ 2ನೇ ವರ್ಷದ ವಾರ್ಷಿಕೋತ್ಸವ, ಸಾಧಕರಿಗೆ ಪ್ರಶಸ್ತಿ ಪ್ರದಾನ, ಪೌರ ಕಾರ್ಮಿಕರಿಗೆ ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ ಕುವೆಂಪು ಅವರು ಪ್ರತಿಪಾದಿಸಿದ ವಿಚಾರಕ್ರಾಂತಿ ಮತ್ತು ತತ್ವಗಳು ಸಮಾಜದಲ್ಲಿನ ಶೋಷಣೆ ಹಾಗೂ ತಾರತಮ್ಯಗಳನ್ನು ತೊಡೆದುಹಾಕಲು ಪ್ರೇರಣೆಯಾಗಿವೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ಅವಕಾಶಗಳು ತಲುಪಿದಾಗ ಮಾತ್ರ ಸಮಾನತೆ ಸಾಧ್ಯ ಎಂದರು. ನಗರದ ನೈರ್ಮಲ್ಯ ಮತ್ತು ಸಾರ್ವಜನಿಕ ಆರೋಗ್ಯಕ್ಕಾಗಿ ಅಹೋರಾತ್ರಿ ಶ್ರಮಿಸುವ ಪೌರ ಕಾರ್ಮಿಕರನ್ನು ಗೌರವಿಸುವುದು ಮತ್ತು ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹಾಗೂ ಪ್ರತಿಭಾವಂತರನ್ನು ಪ್ರೋತ್ಸಾಹಿಸುವುದು ಕುವೆಂಪು ಅವರ ಮೌಲ್ಯಗಳಿಗೆ ನೀಡುವ ನಿಜವಾದ ಗೌರವವಾಗಿದೆ ಎಂದು ಸಚಿವರು ತಿಳಿಸಿದರು. ಇದೇ ಸಂದರ್ಭದಲ್ಲಿ ಮಹಾಕವಿ ಕುವೆಂಪು ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ನೀಡುವಂತೆ ಕರ್ನಾಟಕ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದಕ್ಕಾಗಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರನ್ನು ಸನ್ಮಾನಿಸಿ, ಅಭಿನಂದಿಸಲಾಯಿತು. ಪೂಜ್ಯ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿ, ಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಪೂಜ್ಯ ಶ್ರೀ ಶಿವಾನಂದಪುರಿ ಸ್ವಾಮೀಜಿ, ಪೂಜ್ಯ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ಪೂಜ್ಯ ಶ್ರೀ ಡಾ. ಸೋಮನಾಥ ಸ್ವಾಮೀಜಿಗಳವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಎನ್. ಚಲುವರಾಯಸ್ವಾಮಿ, ಶಾಸಕರಾದ ಶ್ರೀ ಜಿ.ಟಿ. ದೇವೇಗೌಡ, ಶ್ರೀ ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ನಾಗರಾಜ್ ಯಾದವ್ ಹಾಗೂ ಶ್ರೀ ಡಾ. ತಿಮ್ಮಯ್ಯ, ಟ್ರಸ್ಟ್‌ನ ಅಧ್ಯಕ್ಷರಾದ ಶ್ರೀ ಹೆಚ್.ಕೆ. ರಾಮು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Yadgir, Yadgir | Aug 16, 2026
ಕೊಡಗು ಜಿಲ್ಲೆಗೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ.ಶಿವ ಕುಮಾರ್‌ರವರಿಗೆ ಭಾಗಮಂಡಲದಲ್ಲಿ ಪೊಲೀಸ್ ಇಲಾಖೆಯ ಗೌರವ ವಂದನೆ.
Yadgir, Yadgir | Aug 16, 2026
ರಾಜ್ಯದಲ್ಲಿ ಸುಳ್ಳು ಪೋಕ್ಸೋ ಮೊಕದ್ದಮೆಗಳು ದಾಖಲಾಗುತ್ತಿರುವ ಬಗ್ಗೆ.
Yadgir, Yadgir | Aug 16, 2026
ಭೀಮಾ ನದಿಗೆ ನೀರು ಬಿಡುಗಡೆ: ರೈತರು, ಗ್ರಾಮಸ್ಥರಲ್ಲಿ ತಂದ ಹರ್ಷ ಹಾಗೂ ಮುನ್ನೆಚ್ಚರಿಕೆಯ ಸೂಚನೆ ಯಾದಗಿರಿ : ಇಂದು ಮಧ್ಯಾಹ್ನ ಸನ್ನತಿ ಬ್ರಿಜ್ ಕಮ್ ಬ್ಯಾರೇಜ್‌ಗೆ ಭಾರಿ ಪ್ರಮಾಣದಲ್ಲಿ ನೀರು ಬಂದ ಹಿನ್ನೆಲೆಯಲ್ಲಿ, ನದಿಗೆ ಸುಮಾರು 15,000 ಕ್ಯೂಸೆಕ್ಸ್ ನೀರನ್ನು ಹೊರಬಿಡಲಾಗಿದೆ. ಈ ನೀರಿನ ಹರಿವನ್ನು ಸಮರ್ಪಕವಾಗಿ ನಿರ್ವಹಿಸಲು ಯಾದಗಿರಿ ಬ್ಯಾರೇಜಿನ 4 ಗೇಟ್‌ಗಳನ್ನು ತೆರೆದು ಅಷ್ಟೇ ಪ್ರಮಾಣದ ನೀರನ್ನು ಕೆಳಭಾಗಕ್ಕೆ ಬಿಡಲಾಗುತ್ತಿದೆ. ನದಿಯಲ್ಲಿ ನೀರು ಹರಿಯುತ್ತಿರುವುದು ಕೃಷಿ ಚಟುವಟಿಕೆಗಳಿಗೆ ಹಾಗೂ ಕುಡಿಯುವ ನೀರಿನ ಅಭಾವ ತಣಿಸಲು ಸಹಕಾರಿಯಾಗಿದ್ದರೂ, ನೀರಿನ ರಭಸ ಹೆಚ್ಚಿರುವುದರಿಂದ ಮುನ್ನೆಚ್ಚರಿಕೆ ವಹಿಸುವುದು ಅತ್ಯಗತ್ಯವಾಗಿದೆ. ರೈತರು ಹಾಗೂ ಸಾರ್ವಜನಿಕರಿಗೆ ಮನವಿ: ಸುರಕ್ಷಿತ ಅಂತರ ಕಾಯ್ದುಕೊಳ್ಳಿ: ಬ್ಯಾರೇಜಿನ ಮೇಲ್ಭಾಗ ಹಾಗೂ ಕೆಳಭಾಗದ ಗ್ರಾಮಸ್ಥರು ಮತ್ತು ಸಾರ್ವಜನಿಕರು ನದಿ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಜಾನುವಾರುಗಳ ರಕ್ಷಣೆ: ರೈತರು ತಮ್ಮ ಜಾನುವಾರುಗಳನ್ನು ನದಿ ಪಾತ್ರಕ್ಕೆ ಕರೆದೊಯ್ಯದೆ ಸುರಕ್ಷಿತ ಸ್ಥಳಗಳಲ್ಲಿ ಮೇಯಿಸಲು ಕೋರಲಾಗಿದೆ. ಪಂಪ್‌ಸೆಟ್‌ಗಳ ಸುರಕ್ಷತೆ: ನದಿ ದಂಡೆಯಲ್ಲಿದ್ದರೆ ಪಂಪ್‌ಸೆಟ್‌ಗಳು ಹಾಗೂ ಕೃಷಿ ಸಾಮಗ್ರಿಗಳನ್ನು ತಕ್ಷಣ ಮೇಲ್ಭಾಗಕ್ಕೆ ಸ್ಥಳಾಂತರಿಸಿಕೊಳ್ಳುವುದು ಒಳಿತು. ನದಿ ಪಾತ್ರದ ನಿವಾಸಿಗಳು ಆಡಳಿತ ಮಂಡಳಿಯ ಈ ಸೂಚನೆಗಳನ್ನು ಪಾಲಿಸಿ, ಸುರಕ್ಷತೆಗೆ ಆದ್ಯತೆ ನೀಡಬೇಕಾಗಿ ವಿನಂತಿಸಲಾಗಿದೆ.
Yadgir, Yadgir | Aug 16, 2026
ಯಾದಗಿರಿ ನಗರದಲ್ಲಿ ಮಳೆ
Yadgir, Yadgir | Aug 16, 2026