ಅಜ್ಜಂಪುರ: ಘನ ತ್ಯಾಜ್ಯ ವಿಲೇವಾರಿ ಘಟಕದ ವಿರುದ್ಧ ಜನರ ಆಕ್ರೋಶ.! ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ
ಘನತ್ಯಜ್ಜ ವಿಲೇವಾರಿ ನಿರ್ಮಾಣ ಮಾಡಲು ಜಾಗ ಗುರುತಿಸಿರುವುದನ್ನು ವಿರೋಧಿಸಿ ರಸ್ತೆಯನ್ನು ತಡೆದು ಬೃಹತ್ ಪ್ರತಿಭಟನೆ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣ ಪಂಚಾಯಿತಿಗೆ ಭಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚನ್ನಾಪುರ ಗ್ರಾಮದ ಸರ್ವೆ ನಂಬರ್ 82 ರಲ್ಲಿ ಜಾಗ ಗುರುತುಪಡಿಸಿರುವುದನ್ನು ವಿರೋಧಿಸಿ ಚನ್ನಾಪುರ ಗ್ರಾಮಸ್ಥರು ಸೇರಿದಂತೆ ಬಗ್ಗವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹಳ್ಳಿಗಳ ಜನರು ಅಜ್ಜಂಪುರ ಪಟ್ಟಣದ ಗಾಂಧಿ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ತಾಲೂಕು ಕಚೇರಿಯ ವರೆಗೂ ಪ್ರತಿಭಟನ ಮೆರವಣಿಗೆ ನಡೆಸಿ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದರು.